ಶಿಕ್ಷಣ

CSEET ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ 

Views: 332

ಕನ್ನಡ ಕರಾವಳಿ ಸುದ್ದಿ: ಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರಿಸ್ ಇನ್ ಇಂಡಿಯಾದವರು ನಡೆಸಿದ ಸಿ.ಎಸ್.ಇ.ಇ.ಟಿ(ಕಂಪೆನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

ಸಂಸ್ಥೆಯ ಭರವಸೆಯ ವಿದ್ಯಾರ್ಥಿಗಳಾದ ಸನ್ವಿತಾ, ವಂಶಿ, ಕೆ.ವಿ.ಶರಣ್ಯ, ಪ್ರೇಕ್ಷಾ ಪೂಜಾರಿ, ನಾಗೇಂದ್ರ ಇವರು ಉತ್ತಮ ಅಂಕ ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆಯನ್ನು ಪಡೆದಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button