ಜನಮನ

HSRP; ಗೊಂದಲಗಳು ನಿವಾರಣೆಗೆ ಸಾರಿಗೆ ಇಲಾಖೆಯಿಂದ ಸಹಾಯವಾಣಿ

Views: 37

ವಾಹನಗಳಿಗೆ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇದ್ದ ಗಡುವು ವಿಸ್ತರಣೆಯಾಗಿದೆ. ಆದರೆ ಈ ವಿಚಾರದಲ್ಲಿ ಹಲವು ಗೊಂದಲಗಳಿದ್ದು, ವಾಹನ ಸವಾರರು ಪರಿಹಾರ ನೀಡುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಿದ್ದಾರೆ. ಇದಕ್ಕಾಗಿ ಇಲಾಖೆಗೆ ಈಗ ಸಹಾಯವಾಣಿ ಆರಂಭಿಸಿದೆ.

ರಾಜ್ಯದಲ್ಲಿ 1 ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿದ ಹಳೆಯ ವಾಹನಗಳು ಸುರಕ್ಷಿತ ನೋಂದಣಿ ಫಲಕ (ಹೆಚ್ಎಸ್ಆರ್‌ಪಿ) ಅಳವಡಿಕೆ ಮಾಡಲು ಫೆ.17 ಕೊನೆಯ ದಿನಾಂಕವಾಗಿತ್ತು. ಈಗ ಅದನ್ನು ಮೇ 31, 2024ರ ತನಕ ವಿಸ್ತರಣೆ ಮಾಡಿ ಆದೇಶಿಸಲಾಗಿದೆ.

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ನಲ್ಲಿ ವಾಹನದ ಪ್ರತಿಯೊಂದು ವಿವರ ಸಹ ಇರುತ್ತದೆ. ಒಂದು ವೇಳೆ ವಾಹನ ಕಳ್ಳತನವಾದರೆ ಈ ವಿವರದ ಸಹಾಯದಿಂದ ಹುಡುಕಲು ಸಹ ಅನುಕೂಲವಾಗುತ್ತದೆ. ಇದನ್ನು ಅನಧಿಕೃವಾಗಿ ಬದಲಾವಣೆ ಮಾಡುವುದಕ್ಕೆ ಸಾಧ್ಯವೇ ಇಲ್ಲ.

ಸಹಾಯವಾಣಿ ಆರಂಭ

ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡಲು ಆನ್‌ಲೈನ್ ಮೂಲಕ ನೋಂದಣಿ ಮಾಡಿಸಬೇಕು. ಇಂತಹ ಸಮಯದಲ್ಲಿ ತಾಂತ್ರಿಕ ತೊಂದರೆಗಳು ಉಂಟಾದರೆ ಅದನ್ನು ಬಗೆಹರಿಸಲು ಸಹಾಯವಾಣಿಯನ್ನು ಸಾರಿಗೆ ಇಲಾಖೆ ಆರಂಭಿಸಿದೆ.

ಜನರು ಬೆಳಗ್ಗೆ 10 ರಿಂದ ಸಂಜೆ 5.30ರ ತನಕ ಸಹಾಯವಾಣಿ ಸಂಖ್ಯೆ 9449863429/26 ಸಂಖ್ಯೆಗೆ ಕರೆ ಮಾಡಬಹುದು. ಆನ್‌ಲೈನ್‌ನಲ್ಲಿ ಹೆಚ್‌ಎಸ್ಆರ್‌ಪಿ ಪ್ಲೇಟ್ ನೋಂದಣಿ ಬಗ್ಗೆ ಹಲವಾರು ಲಿಂಕ್‌ಗಳು ಸಿಗುತ್ತಿವೆ. ಅವುಗಳ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಸಾರಿಗೆ ಇಲಾಖೆ ಮನವಿ ಮಾಡಿದೆ.

ವಾಹನಗಳಿಗೆ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ಹೇಳಿದೆ.

ಈ ವೆಬ್‌ಸೈಟ್ ಮೂಲಕ ನೋಂದಣಿ ಮಾಡಿ ಆಳವಡಿಸಿದ ಹೆಚ್‌ಎಸ್‌ಆರ್‌ಪಿಗಳು ಮಾತ್ರ ಮಾನ್ಯತೆ ಹೊಂದಿರುತ್ತವೆ. ಇತರ ವೆಬ್ ಪೋರ್ಟಲ್ ಬಳಕೆ ಮಾಡಬಾರದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್‌ಸೈಟ್‌ಗೆ ಭೇಟಿ ನೀಡಿ ವಾಹನದ ವಿವರ ನೀಡಿ ನೋಂದಣಿ ಮಾಡಿಸಬೇಕು. ಫಲಕ ಅಳವಡಿಕೆ ದಿನಾಂಕ, ಮಾರಾಟ ಕೇಂದ್ರದ ಹೆಸರು, ವಿಳಾಸ ಖಚಿತಪಡಿಸಿಕೊಳ್ಳಬೇಕು. ಆನ್‌ಲೈನ್ ಮೂಲಕವೇ ನಿಗದಿತ ಶುಲ್ಕವನ್ನು ಪಾವತಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

 

 

 

 

 

Related Articles

Back to top button