ಜನಮನ

HSRP ನಂಬರ್‌ ಪ್ಲೇಟ್‌ ಅಳವಡಿಸಲು ಫೆ .17 ಗಡುವು,ಸಾರಿಗೆ ಇಲಾಖೆ ಮಾಹಿತಿ ಏನು?

Views: 352

ಬೆಂಗಳೂರು, ಸಾರಿಗೆ ಇಲಾಖೆ ಆದೇಶದಂತೆ ವಾಹನಗಳಿಗೆ ಹಳೆ ಫಲಕ ಬದಲಿಸಿ ಎಚ್‌ಎಸ್‌ಆರ್‌ಪಿ ಅಳವಡಿಸಲು 2024ರ ಫೆಬ್ರವರಿ 17ರವರೆಗೆ ಗಡುವು ನೀಡಲಾಗಿದೆ. ಫೆಬ್ರವರಿ 17ಕ್ಕೆ ಗಡುವು ಮುಗಿದ ನಂತರ ಎಚ್‌ಎಸ್‌ಆರ್‌ಪಿ ಫಲಕಗಳಿಲ್ಲದ ವಾಹನಗಳ ಮಾಲೀಕರಿಗೆ ಭಾರೀ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾದ ವಾಹನಗಳಿಗೆ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಅಳವಡಿಸುವಂತೆ ಸಾರಿಗೆ ಇಲಾಖೆ ಸೂಚಿಸಿತ್ತು. ಇಲಾಖೆ ಮೊದಲು 2023ರ ನವೆಂಬರ್ 17ರವರೆಗೆ ಕಾಲಾವಕಾಶ ನೀಡಿತ್ತು. ಆದರೆ ಇದಕ್ಕೆ ಜನ ಸ್ಪಂದಿಸದ ಕಾರಣ ಹಳೆ ಫಲಕ ಬದಲಿಸಲು ಫೆಬ್ರವರಿ 17ರವರೆಗೆ ಗಡುವು ವಿಸ್ತರಿಸಲಾಗಿತ್ತು.

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕೂ ಮುನ್ನ ನೋಂದಣಿಯಾಗಿರುವ ವಾಹನಗಳ ಸಂಖ್ಯೆ ಸುಮಾರು 2 ಕೋಟಿಯಷ್ಟಿದೆ. ಗಡುವು ವಿಸ್ತರಿಸಿದರೂ ಈವರೆಗೆ ಕೇವಲ 12 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ. ಇನ್ನೂ 1.88 ಕೋಟಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಲು ಸಾರ್ವಜನಿಕರು ಏನು ಮಾಡಬೇಕು ಎನ್ನುವ ಕುರಿತು ಪ್ರಕಟಣೆ ಹೊರಡಿಸಿದೆ.

17-08-2023 ಹಾಗೂ ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ರವರ ಸುತ್ತೋಲೆ ಸಂಖ್ಯೆ: ಸಾಆ/ನೋಂ- 1/30-434/2022-23, ದಿನಾಂಕ : 18-08-2023 ಪ್ರಕಾರ, ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್‌ಪಿ) ಅಳವಡಿಸುವುದು ಕಡ್ಡಾಯವಾಗಿದೆ.

ಎಚ್‌ಎಸ್‌ಆರ್‌ಪಿ ಅಳವಿಡಿಕೆಯ ಕಾರ್ಯವಿಧಾನವೇನು?

ಎಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ಪೋರ್ಟಲ್‌ಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಗಿನ ಕ್ರಮವನ್ನು ಅನುಸರಿಸಿ.

• ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.

• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.

• HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲ‌ರ್ ಸ್ಥಳವನ್ನು ಆಯ್ಕೆಮಾಡಿ.

• HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.

• ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.

• ನಿಮ್ಮ ಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.

• ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

• ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.

ವಾಹನ ಸವಾರರು ಈ ಪ್ರಮುಖ ಅಂಶಗಳನ್ನು ಗಮನಿಸಿ

ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೋಗ್ರಾಮ್ / IND ಮಾರ್ಕ್ / ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯ ಪ್ಲೇಟ್‌ಗಳು / ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.

* HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ.

* ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ HSRP ರಸೀದಿಯನ್ನು ಹಾಜರುಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

* ಅಳವಡಿಕೆಗೆ ದಿನಾಂಕ: 17-11-2023 ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ ಟಿಡಿ 193 ಟಿಡಿಒ 2021, ದಿನಾಂಕ: 16-11-2023ರಲ್ಲಿ ದಿನಾಂಕ 17-02-2024 ವಿಸ್ತರಿಸಲಾಗಿರುತ್ತದೆ.

* ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಇಲಾಖೆ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (helpline) ಕಛೇರಿ ಕಾರ್ಯದ ಸಮಯ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

 

 

 

 

Related Articles

Back to top button