ಜನಮನ

HSRP ಅಳವಡಿಕೆಗೆ ಜೂನ್ 12ಕ್ಕೆ ಅಂತಿಮ ಗಡುವು; ವಾಹನ ಸವಾರರ ಮೇಲೆ ದಂಡಾಸ್ತ್ರ ಪ್ರಯೋಗಕ್ಕೆ ಸಿದ್ಧತೆ?

Views: 103

2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ  ಪ್ಲೇಟ್‌ಗಳ ಎಚ್‌ಎಸ್‌ಆರ್‌ಪಿ ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ಇನ್ನು ಐದು ದಿನಗಳಲ್ಲಿ ಮುಕ್ತಾಯವಾಗಲಿದೆ.

ಹೈಕೋರ್ಟ್‌ಗೆ ಮಾಹಿತಿ ನೀಡಿದ್ದ ರಾಜ್ಯ ಸರ್ಕಾರ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12ರವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿತ್ತು.

ವಿಭಾಗೀಯ ಪೀಠವು ಮುಂದಿನ ವಿಚಾರಣೆಯನ್ನು ಜೂನ್ 11 ರಂದು ಕೈಗೆತ್ತಿಕೊಳ್ಳಲಿದೆ. ಒಂದು ವೇಳೆ ಕೋರ್ಟ್ ಸರ್ಕಾರದ ಪರವಾಗಿ ಆದೇಶ ನೀಡಿದರೆ ವಾಹನ ಸವಾರರ ಮೇಲೆ ಸರ್ಕಾರ ದಂಡಾಸ್ತ್ರ ಪ್ರಯೋಗಿಸುವುದು ಖಚಿತವಾಗುತ್ತದೆ.

ಮತ್ತೆ ಗಡುವು ವಿಸ್ತರಣೆಗೆ ಅರ್ಜಿ ಸಲ್ಲಿಕೆ

ಹಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯ ಮಾಡಿರುವ ಬಗ್ಗೆ ಎಚ್‌ಎಸ್‌ಆರ್‌ಪಿ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಇತರರು ಮೇಲ್ಮನವಿ ಸಲ್ಲಿಸಿದ್ದರು. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ತಯಾರಿಸುವ ಬಿಎನ್‌ಡಿ ಎನರ್ಜಿ ಲಿಮಿಟೆಡ್‌, ಗಡುವು ವಿಸ್ತರಣೆಗೆ ಮನವಿ ಮಾಡಿತ್ತು.

 

 

Related Articles

Back to top button
error: Content is protected !!