ಇತರೆ

HSRP ಅಳವಡಿಕೆ ಬಗ್ಗೆ ವಾಹನ ಸವಾರರಿಗೆ ಮತ್ತೆ ಗಡುವು ವಿಸ್ತರಣೆ ಮಾಡಿದ ಹೈಕೋರ್ಟ್!

Views: 172

ಬೆಂಗಳೂರು:ಹೆಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4ರ ತನಕ ವಿಸ್ತರಣೆ ಮಾಡಿದೆ

ಈ ಮೊದಲು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12ರವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಈಗ ದಿನಾಂಕ ಮುಕ್ತಾಯವಾದ ಹಿನ್ನಲೆಯಲ್ಲಿ ಈ ಆದೇಶವನ್ನು ಜುಲೈ 4ರವರೆಗೆ ವಿಸ್ತರಿಸಲಾಗಿದೆ

ವಿಚಾರಣೆಯನ್ನು ಕೈಗೆತ್ತಿಕೊಂಡ ವಿಭಾಗೀಯ ಪೀಠ ಗಡುವು ವಿಸ್ತರಣೆ ಮಾಡಿ ಆದೇಶ ನೀಡಿದೆ. ಇದರೊಂದಿಗೆ ವಾಹನ ಸವಾರರಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಅವಕಾಶ ಸಿಕ್ಕಂತಾಗಿದೆ.

ಹಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯ ಮಾಡಿರುವ ಬಗ್ಗೆ ಎಚ್‌ಎಸ್‌ಆರ್‌ಪಿ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಇತರರು ಮೇಲ್ಮನವಿ ಸಲ್ಲಿಸಿದ್ದವು. ಎಚ್‌ಎಸ್‌ಆರ್‌ಪಿ ತಯಾರಿಸುವ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕಂಪನಿ ಅವಧಿ ವಿಸ್ತರಣೆ ಮಾಡಲು ಮನವಿ ಸಲ್ಲಿಸಿದೆ.

 

Related Articles

Back to top button
error: Content is protected !!