HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ವಿಸ್ತರಣೆ

Views: 179
2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಈಗಾಗಲೇ ಇಲ್ಲಿವರೆಗೂ ನಾಲ್ಕು ಬಾರಿ ಗಡುವು ನೀಡಿತ್ತು. ಇದೀಗ ಮತ್ತೆ ಇಂದು (ಸೆಪ್ಟೆಂಬರ್ 18) ಗಡುವನ್ನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.
HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದ ವಾಹನ ಸವಾರರಿಗೆ ಸಪ್ಟೆಂಬರ್ 16ರಿಂದ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ತಿಳಿಸಿತ್ತು. ಆದರೆ ಈ ವಿಚಾರಣೆ ಸದ್ಯ ಹೈಕೋರ್ಟ್ನಲ್ಲಿ ಇದ್ದುದರಿಂದ ಸೆಪ್ಟೆಂಬರ್ 18ರ ವರೆಗೂ ಮುಂದೂಡಿಕೆ ಮಾಡಲಾಗಿತ್ತು. ಇದೀಗ ನವೆಂಬರ್ 20ರ ವರೆಗೂ ಅಂದರೆ ಮುಂದಿನ 2 ತಿಂಗಳವರೆಗೂ ನಂಬರ್ ಪ್ಲೇಟ್ ಅಳವಡಿಕೆಗೆ ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ.
ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್ ಸಿಕ್ಕಿದೆ.







