ಜನಮನ

IBPS ನೇಮಕಾತಿ; ವಿವಿಧ ಬ್ಯಾಂಕ್ ಗಳಲ್ಲಿ 6215 ಪ್ರೊಬೆಷನರಿ ಸೇರಿದಂತೆ ಹಲವು ಹುದ್ದೆಗಳು  

Views: 83

ಕನ್ನಡ ಕರಾವಳಿ ಸುದ್ದಿ: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS)ನಿಂದ ವಿವಿಧ ಬ್ಯಾಂಕ್ ಗಳಲ್ಲಿ 6215 ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರೊಬೆಷನರಿ ಆಫೀಸರ್, ಐಟಿ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಈ ಕುರಿತು ಮಾಹಿತಿ ಇಲ್ಲಿದೆ.

ಹುದ್ದೆ ವಿವರ: ಒಟ್ಟು ಹುದ್ದೆ 6215

ಪ್ರೊಬೆಷನರಿ ಆಫೀಸರ್, ಐಟಿ ಆಫೀಸರ್, ಅಗ್ರಿಕಲ್ಚರ್ ಫೀಲ್ಡ್ ಆಫೀಸರ್, ರಾಜಸ್ವಸಹ ಅಧಿಕಾರಿ, ಲಾ ಆಫೀಸರ್, ಹೆಚ್ಆರ್ ಆಫೀಸರ್, ಮಾರ್ಕೆಟಿಂಗ್ ಆಫೀಸರ್.

ಯಾವ್ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆ:

ಅಧಿಸೂಚನೆ (IBPS)

ಬ್ಯಾಂಕ್ ಆಫ್ ಬರೋಡಾ- 1033

ಬ್ಯಾಂಕ್ ಆಫ್ ಇಂಡಿಯಾ705

ಬ್ಯಾಂಕ್ ಆಫ್ ಮಹರಾಷ್ಟ್ರ- 1200

ಕೆನರಾ ಬ್ಯಾಂಕ್- 1000

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ – 545

ಇಂಡಿಯನ್ ಓವರ್ಸೀಸ್ ಬ್ಯಾಂಕ್- 464

ಪಂಜಾಬ್ ನ್ಯಾಷನಲ್ ಬ್ಯಾಂಕ್ – 810

ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ – 358

ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಪದವಿ, ಸ್ನಾತಕೋತ್ತರ ಪದವಿ, ಕಾನೂನು ಪದವಿಯನ್ನು ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ಆಗಿದ್ದು, ಗರಿಷ್ಠ ವಯೋಮಿತಿ 30 ವರ್ಷವಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ. ಜಾ ಮತ್ತು ಪ. ಪಂ ಅಭ್ಯರ್ಥಿಗಳಿಗೆ 175 ರೂ. ಸಾಮಾನ್ಯ, ಒಬಿಸಿ, ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ಭರಿಸಬೇಕಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ಪ್ರಿಲಿಮನರಿ, ಮುಖ್ಯ ಪರೀಕ್ಷೆ ವೈಯಕ್ತಿಕ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಒಳಗಾಗಬೇಕಿದೆ.

ಈ ಹುದ್ದೆಗೆ ಜುಲೈ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 21 ಆಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ibps.in ಭೇಟಿ ನೀಡಬಹುದಾಗಿದೆ.

Related Articles

Back to top button