ಆರ್ಥಿಕ

IBPS: ಬ್ಯಾಂಕ್‌ ಉದ್ಯೋಗಾರ್ಥಿಗಳಿಗೆ  ಬರೋಬ್ಬರಿ 13,217 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 

Views: 97

ಕನ್ನಡ ಕರಾವಳಿ ಸುದ್ದಿ: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಬರೋಬ್ಬರಿ 13,217 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಫೀಸ್‌ ಅಸಿಸ್ಟಂಟ್‌, ಆಫೀಸರ್‌ ಮುಂತಾದ ಖಾಲಿ ಇದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಆಫೀಸ್‌ ಅಸಿಸ್ಟಂಟ್‌-7,972 ಹುದ್ದೆ, ವಿದ್ಯಾರ್ಹತೆ: ದೇಶದ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ

ಆಫೀಸರ್‌ ಸ್ಕೇಲ್‌-I (ಅಸಿಸ್ಟಂಟ್‌ ಮ್ಯಾನೇಜರ್‌)-3,907 ಹುದ್ದೆ, ವಿದ್ಯಾರ್ಹತೆ: ದೇಶದ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ

ಆಫೀಸರ್‌ ಸ್ಕೇಲ್‌-II (ಮ್ಯಾನೇಜರ್‌)-1,139 ಹುದ್ದೆ, ವಿದ್ಯಾರ್ಹತೆ: ಸಿಎ, ಪದವಿ, ಎಲ್‌ಎಲ್‌ಬಿ, ಎಂಬಿಎ

ಆಫೀಸರ್‌ ಸ್ಕೇಲ್‌-III (ಸೀನಿಯರ್‌ ಮ್ಯಾನೇಜರ್‌)-199 ಹುದ್ದೆ, ವಿದ್ಯಾರ್ಹತೆ: ದೇಶದ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಜನರಲ್‌ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು 850 ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಇಎಸ್‌ಎಂ / ಡಿಇಎಸ್‌ಎಂ ಅಭ್ಯರ್ಥಿಗಳು 175 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಆಯ್ಕೆ ವಿಧಾನ

ಪ್ರಿಲಿಮಿನರಿ ಪರೀಕ್ಷೆ, ಮೇನ್‌ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪ್ರಿಲಿಮಿನರಿ ಪರೀಕ್ಷೆ ನವೆಂಬರ್‌ / ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಮೇನ್‌ ಪರೀಕ್ಷೆ ಡಿಸೆಂಬರ್‌ / ಫೆಬ್ರವರಿಯಲ್ಲಿ ನಡೆಯಲಿದೆ.

ಕೊನೆಯ ದಿನಾಂಕ ಸೆಪ್ಟೆಂಬರ್ 21

ಅರ್ಜಿ ಸಲ್ಲಿಸುವ ವಿಧಾನ

ಆಫೀಸ್‌ ಅಸಿಸ್ಟಂಟ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

(https://ibpsreg.ibps.in/rrbxivaug25/)

ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌

(https://ibpsreg.ibps.in/rrbxivscag25/)

ಹೆಸರು ನೋಂದಾಯಿಸಿ. ಲಾಗಿನ್‌ ಆಗಿ.

ಎಚ್ಚರಿಕೆಯಿಂದ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

ಅಗತ್ಯ ಡಾಕ್ಯುಮೆಂಟ್‌, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್‌ ಮಾಡಿ.

ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).

ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: https://ibps.in/ಗೆ ಭೇಟಿ ನೀಡಿ.

Related Articles

Back to top button