LPG ಸಿಲಿಂಡರ್ ಬೆಲೆಯಲ್ಲಿ ಇಳಿಕೆ

Views: 203
ಚುನಾವಣಾ ಪ್ರಕ್ರಿಯೆ ಶುರುವಾದ ಬಳಿಕ ಮೂರನೇ ಬಾರಿಗೆ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿದೆ.
ಇಂದಿನಿಂದ ದೇಶದ ವಿವಿಧ ನಗರಗಳಲ್ಲಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ 70 ರೂಪಾಯಿ ಕಡಿಮೆ ಆಗಲಿದೆ. 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮಾತ್ರ ಇಳಿಕೆ ಮಾಡಲಾಗಿದೆ. ಈ ಬಾರಿಯೂ ಗೃಹಬಳಕೆಯ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 69.50 ರೂ.ನಿಂದ 1676 ರೂ.ಗೆ ಇಳಿದಿದೆ. ಎಪ್ರಿಲ್ ನಲ್ಲಿ 19 ರೂಪಾಯಿ ಇಳಿಕೆಯಾಗಿ 1745.50 ರೂಪಾಯಿಗೆ ಇಳಿದಿತ್ತು. ಕೋಲ್ಕತ್ತಾದಲ್ಲಿ 1,787 ರೂ.ಗೆ ಲಭ್ಯವಾಗಲಿದೆ. ಮುಂಬೈನಲ್ಲಿ 1,629 ರೂಪಾಯಿ ಪಾವತಿಸಬೇಕಾಗುತ್ತದೆ. ಚೆನ್ನೈನಲ್ಲಿ 1,840.50ಗೆ ಇಳಿಕೆಯಾಗಿದೆ. ಇನ್ನು ಬೆಂಗಳೂರಲ್ಲಿ 1,813 ರೂಪಾಯಿ ಆಗಿದೆ.
ಕಳೆದ ತಿಂಗಳು ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ 19 ರೂಪಾಯಿ ಇಳಿಕೆ ಆಗಿತ್ತು. ಆದರೆ ಗ್ರಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಇಳಿಕೆ ಆಗಿಲ್ಲ. ಮಾರ್ಚ್ನಲ್ಲಿ ಪ್ರಧಾನಿ ಮೋದಿ ಗೃಹ ಬಳಕೆಯ ಸಿಲಿಂಡರ್ನಲ್ಲಿ 100 ರೂಪಾಯಿ ಕಡಿತ ಮಾಡುತ್ತಿದ್ದೇವೆ ಎಂದು ಘೋಷಣೆ ಮಾಡಿದ್ದರು. ಅದಾದ ನಂತರ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಳಿತ ಆಗಿಲ್ಲ






