ಇತರೆ

Mangalur:ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ತೊರಕೆ ಮೀನು

Views: 2

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ  ತೊರಕೆ ಮೀನು ಬಲೆಗೆ ಬಿದ್ದಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.ಬಾರಿ ದೊಡ್ಡ ಗಾತ್ರದ ತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.

Related Articles

Back to top button