ಜನಮನ

SSLC ಆದವರಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ: 23,757 ಗ್ರಾಮೀಣ ಡಾಕ್ ಸೇವಕ್ ಹುದ್ದೆ ನೇಮಕಾತಿ

Views: 26

ಕನ್ನಡ ಕರಾವಳಿ ಸುದ್ದಿ: ಭಾರತೀಯ ಅಂಚೆ ಇಲಾಖೆಯಲ್ಲಿನ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ (BPM) ಮತ್ತು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ABPM)/ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿ ನಡೆಯಲಿದೆ.

ಹುದ್ದೆ ವಿವರ: ದೇಶಾದ್ಯಂತದ ಅಂಚೆ ಕಚೇರಿಗಳಲ್ಲಿ ಈ ನೇಮಕಾತಿ ನಡೆಯಲಿದ್ದು, ಒಟ್ಟು 23,757 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1,116 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿ ನಡೆಯಲಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ 40 ವರ್ಷಗಳಾಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲ ಚೇತನ, ತೃತೀಯ ಲಿಂಗಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇತರೆ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ವೇತನ: ಗ್ರಾಮೀಣ ಡಾಕ್ ಸೇವಕ್ ಬ್ರಾಂಚ್ ಪೋಸ್ಟ್ ಮಾಸ್ಟರ್ (BPM) ಹುದ್ದೆಗೆ 12,000 – 29,380ರೂ. ವರೆಗೆ ಗ್ರಾಮೀಣ ಡಾಕ್ ಸೇವಕ್ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ABPM) ಹುದ್ದೆಗೆ 10000 – 24470ರೂ. ವರೆಗೆ ವೇತನ ನಿಗದಿಪಡಿಸಲಾಗಿದೆ.

ಆಯ್ಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಅಭ್ಯರ್ಥಿಗಳು ಸೆಪ್ಟಂಬರ್ 2ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟಂಬರ್ 21 ಆಗಿದೆ. ಅರ್ಜಿ ತಪ್ಪು ತಿದ್ದುಪಡಿಗೆ ಸೆಪ್ಟಂಬರ್ 23ರಿಂದ 24ರವರೆಗೆ ಅವಕಾಶ ನೀಡಲಾಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ವಿವರಣೆ, ಅರ್ಜಿ ಸಲ್ಲಿಕೆ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ಜಾಲತಾಣವಾದ indiapost.gov.in ಭೇಟಿ ನೀಡಬಹುದಾಗಿದೆ.

Related Articles

Back to top button
error: Content is protected !!