SSLC ಆದವರಿಗೆ, ಬ್ರಾಂಚ್ ಪೋಸ್ಟ್ ಮಾಸ್ಟರ್/ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

Views: 471
‘ಕನ್ನಡ ಕರಾವಳಿ’ ಉದ್ಯೋಗ ಮಾಹಿತಿ,
ಬೆಂಗಳೂರು:ಅಂಚೆ ಇಲಾಖೆಯಲ್ಲಿನ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1940 ಗ್ರಾಮೀಣ ಡಾಕ್ ಸೇವಕ್ ಉದ್ಯೋಗ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ) ಹುದ್ದೆಗಳ ನೇಮಕಾತಿ ನಡೆಯಲಿದೆ.ಮಾಹಿತಿ ಇಲ್ಲಿದೆ.
ಒಟ್ಟು ಹುದ್ದೆ: ಕರ್ನಾಟಕದಲ್ಲಿ ಬಿಪಿಎಂ ಮತ್ತು ಎಬಿಪಿಎಂನ 1940 ಹುದ್ದೆ ನೇಮಕಾತಿ ನಡೆಯಲಿದ್ದು, ಯಾವ ಜಿಲ್ಲೆಗೆ ಎಷ್ಟು ಉದ್ಯೋಗ ಪಟ್ಟಿ ಇಲ್ಲಿದೆ.
ಬಾಗಲಕೋಟೆ – 23, ಬಳ್ಳಾರಿ – 50, ಬೆಂಗಳೂರು ಜಿಪಿಒ – 4, ಬೆಳಗಾವಿ -33, ಬೆಂಗಳೂರು ಪೂರ್ವ – 83, ಬೆಂಗಳೂರು ದಕ್ಷಿಣ – 62, ಬೆಂಗಳೂರು ಪಶ್ಚಿಮ -39, ಬೀದರ್ – 59, ಚನ್ನಪಟ್ಟಣ – 87, ಚಿಕ್ಕಮಗಳೂರು -60, ಚಿಕ್ಕೋಡಿ -19, ಚಿತ್ರದುರ್ಗ – 27, ದಾವಣಗೆರೆ – 40, ಧಾರವಾಡ – 22, ಗದಗ – 18, ಗೋಕಾಕ್ -7, ಹಾಸನ – 78, ಹಾವೇರಿ – 44, ಕಲ್ಬುರ್ಗಿ -83, ಕಾರವಾರ – 43, ಕೊಡಗು -76, ಕೋಲಾರ -106, ಕೊಪ್ಪಳ -36, ಮಂಡ್ಯ- 65, ಮಂಗಳೂರು – 62, ಮೈಸೂರು – 42, ನಂಜನಗೂಡು – 66, ಪುತ್ತೂರು – 89, ರಾಯಚೂರು – 63, ಆರ್ಎಂಎಸ್ ಎಚ್ಬಿ – 3, ಆರ್ಎಂಎಸ್ ಕ್ಯೂ -9, ಶಿವಮೊಗ್ಗ – 89, ಶಿರಸಿ – 66, ತುಮಕೂರು -107, ಉಡುಪಿ -90, ವಿಜಯಪುರ -40, ಯಾದಗಿರಿ – 50,
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ 40 ವರ್ಷಗಳಾಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲ ಚೇತನ, ತೃತೀಯ ಲಿಂಗಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇತರ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ವೇತನ: ಗ್ರಾಮೀಣ ಡಾಕ್ ಸೇವಕ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಹುದ್ದೆಗೆ 12,000 – 29,380ರೂ. ವರೆಗೆ ಗ್ರಾಮೀಣ ಡಾಕ್ ಸೇವಕ್ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ) ಹುದ್ದಗೆ 10000 – 24470ರೂ. ವರೆಗೆ ವೇತನ ನಿಗದಿಪಡಿಸಲಾಗಿದೆ.
ಆಯ್ಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಅಭ್ಯರ್ಥಿಗಳು ಜುಲೈ 15ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 5 ಆಗಿದೆ. ಅರ್ಜಿ ತಪ್ಪು ಸರಿಪಡಿಸುವಿಕೆಗೆ ಆಗಸ್ಟ್ 6 ರಿಂದ 8ರವರೆಗೆ ಕಾಲ ಅವಕಾಶ ನೀಡಲಾಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ವಿವರಣೆ, ಅರ್ಜಿ ಸಲ್ಲಿಕೆ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ಜಾಲತಾಣವಾದ karnatakapost.gov.in ಗೆ ಭೇಟಿ ನೀಡಬಹುದಾಗಿದೆ.







