SSLC: ಎಸ್ಎಸ್ಎಲ್ಸಿ ಪರೀಕ್ಷೆ-2, ನೋಂದಣಿ ದಿನಾಂಕ ವಿಸ್ತರಣೆ

Views: 15
ಬೆಂಗಳೂರು :2024ರ ಎಸ್‌ಎಸ್ಎಲ್‌ಸಿ ಪರೀಕ್ಷೆ-2 ವೇಳಾಪಟ್ಟಿಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ದಿನಾಂಕ 07-06-2024 ರಿಂದ 14-06-2024 ರ ಬದಲು ಪರೀಕ್ಷೆ-2 ದಿನಾಂಕ14-06-2024 ರಿಂದ 22-06-2024ರವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನೋಂದಣಿ ದಿನಾಂಕವನ್ನು ವಿಸ್ತರಣೆ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಿರ್ದೇಶಕರು (ಪರೀಕ್ಷೆಗಳು) ಹೆಚ್. ಎನ್. ಗೋಪಾಲಕೃಷ್ಣ ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಪರೀಕ್ಷಾ ಶುಲ್ಕ ಪಾವತಿಗಾಗಿ ನಿಗದಿಪಡಿಸಿರುವ ದಿನಾಂಕಗಳನ್ನು ವಿಸ್ತರಿಸಿದೆ. ಆನ್‌ಲೈನ್‌ನಲ್ಲಿ ಪರೀಕ್ಷಾ ಅರ್ಜಿಯನ್ನು ನೋಂದಾಯಿಸಲು ಹಾಗೂ NEFT ಚಲನ್ ಮೂಲಕ ಬ್ಯಾಂಕ್‌ಗೆ ಪರೀಕ್ಷಾ ಶುಲ್ಕ ಪಾವತಿಸಲು ನಿಗದಿಪಡಿಸಿರುವ ದಿನಾಂಕಗಳು ಹೀಗಿವೆ.
* ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೆಬ್ ಸೈಟ್ ಮೂಲಕ ಲಾಗಿನ್ ಆಗಿ ವಿದ್ಯಾರ್ಥಿಗಳ ಮಾಹಿತಿ ಅಪ್‌ಲೋಡ್ ಮಾಡಲು ನಿಗದಿಪಡಿಸಿದ ದಿನಾಂಕವನ್ನು 19/5/2024 ರಿಂದ 21/5/2024ರ ಮಧ್ಯರಾತ್ರಿ 12 ಗಂಟೆಯ ತನಕ ವಿಸ್ತರಣೆ ಮಾಡಲಾಗಿದೆ.
* ಮಂಡಳಿ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ನಿಗದಿಪಡಿಸಿದ ದಿನಾಂಕ ಮೊದಲು 21/5/2024. ಈಗ 24/5/2024ರ ತನಕ ವಿಸ್ತರಣೆ ಮಾಡಲಾಗಿದೆ.
* ಕ್ರಮ ಸಂಖ್ಯೆ-3ರಂತೆ ಚಲನ್ ಮುದ್ರಿಸಿಕೊಂಡು ಬ್ಯಾಂಕ್‌ಗೆ ಜಮೆ ಮಾಡಲು ನಿಗದಿಪಡಿಸಿದ ದಿನಾಂಕ ಮೊದಲು 23/5/2024 ಎಂದು ನಿಗದಿ ಮಾಡಲಾಗಿತ್ತು. ಈಗ 27/5/2024ರ ತನಕ ವಿಸ್ತರಿಸಲಾಗಿದೆ.
* 2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳ ಎನ್‌ಸಿಆರ್ & ಎನ್‌ಎಸ್‌ಪಿಆರ್ ಪರೀಕ್ಷಾ ಶುಲ್ಕವನ್ನು ಹಳೆಯ ಪದ್ಧತಿಯಂತೆ ಮಂಡಳಿಯ ನೆಫ್ಟ್ ಚಲನ್ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಾವತಿಸಲು ನಿಗದಿಪಡಿಸಿದ ದಿನಾಂಕ ಮೊದಲು 23/5/2024. ಈಗ 27/5/2024ರ ತನಕ ವಿಸ್ತರಿಸಲಾಗಿದೆ.
* ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನೊಳಗೊಂಡಂತೆ ಶಾಲಾ ಲಾಗಿನ್‌ನಲ್ಲಿ ಸೃಜಿಸಲಾಗುವ ಚಲನ್ ಬಳಸಿಕೊಂಡು ಶುಲ್ಕ ಪಾವತಿಸಿದ ಮೂಲ ಚಲನ್
* 2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳ (ಎನ್‌ಸಿಆರ್ & ಎನ್‌ಎಸ್‌ಪಿಆರ್) ಎಂಎಸ್ಎ ಮತ್ತು ಹಿಂದಿನ ಪದ್ಧತಿಯಂತೆ ಮಂಡಳಿ ನೆಫ್ಟ್ ಚಲನ್ ಮೂಲಕ ಶುಲ್ಕ ಪಾವತಿಸಿದ ಮೂಲ ಚಲನ್, ನಾಮಿನಲ್ ರೋಲ್ ಮತ್ತು ಸಂಬಂಧಿಸಿದ ಇತರೆ ದಾಖಲೆಗಳನ್ನು ಸಲ್ಲಿಸಲು 27/5/2024 ದಿನಾಂಕ ನಿಗದಿ ಮಾಡಲಾಗಿತ್ತು. ಇದನ್ನು 30/5/2024ರ ತನಕ ವಿಸ್ತರಣೆ ಮಾಡಲಾಗಿದೆ.
.