ಕ್ರೀಡೆ

ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ: ಅಕ್ಷತಾ ಖಾರ್ವಿ ಕರಾಟೆಯಲ್ಲಿ ಕಂಚಿನ ಪದಕ

Views: 286

ಕುಂದಾಪುರ:ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಕಾಲೇಜಿನ ವಿದ್ಯಾರ್ಥಿನಿ ಕು| ಅಕ್ಷತಾ ಖಾರ್ವಿ ಮಂಗಳೂರು ವಿ.ವಿ. ಅಂತರ ಕಾಲೇಜು ಕರಾಟೆ ಚಾಂಪಿಯನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಇತ್ತೀಚೆಗೆ  ಶ್ರೀ ಕಟೀಲು ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ನಡೆದ ಈ ಸ್ಪರ್ಧೆಯಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ವಿಜೇತೆಯಾದ ಈ ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದ ಹಾಗೂ ಸಮಸ್ತ ವಿದ್ಯಾರ್ಥಿ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ.

Related Articles

Back to top button